ಬೆಂಗಳೂರು : ಕರ್ನಾಟಕ ವಿದ್ಯಾರ್ಥಿ ವೇದಿಕೆ ಸಂಸ್ಥೆಯ 12 ನೇ ವಾರ್ಷಿಕೋತ್ಸವದ ಸಲುವಾಗಿ ಹಮ್ಮಿಕೊಂಡಿದ್ದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪರಮ ಪೂಜ್ಯ ಶ್ರೀ ವಿಶ್ವರಾಧ್ಯ ಮಹಾಸ್ವಾಮಿಗಳು ಸುಕ್ಷೇತ್ರ ಚಟ್ನಳ್ಳಿ ದ್ವಾದಶ ಜ್ಯೋತಿರ್ಲಿಂಗೇಶ್ವರ, ಶಹಪುರರವರು ವಹಿಸಿಕೊಂಡಿದ್ದು, ಎಲ್ಲಾ ಅತಿಥಿ ಗಣ್ಯರು ಸೇರಿ ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದರು.
ಸುಮಾರು 12 ವರ್ಷಗಳಿಂದ ಸಾಮಾಜಿಕ ಸೇವೆಯಲ್ಲಿ ಪ್ರಾಮಾಣಿಕವಾಗಿ ತನ್ನನ್ನು ತನು ತೊಡಗಿಸಿಕೊಂಡು ಬಹಳಷ್ಟು ಸಾಧನೆಗಳನ್ನ ಮಾಡಿರುವ ಈ ಸಂಸ್ಥೆ, . ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಲವಾರು ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಹಲವಾರು ವರ್ಷಗಳಿಂದ ಪ್ರಾಮಾಣಿಕ ಸೇವೆ ಸಲ್ಲಿಸಿ, ಜನ ಮನ ಗೆದ್ದಿರುವ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಧ್ಯಕ್ಷರಾದ ಡಾ. ಟಿ. ಶಿವಕುಮಾರ್ ನಾಗರ ನವಿಲೆಯವರಿಗೆ “ಕರುನಾಡು ಸೇವಾರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ವಿದ್ಯಾರ್ಥಿ ವೇದಿಕೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ. ಎಸ್. ಶಿವಶಂಕರ್, ವಿಧಾನ ಪರಿಷತ್ ಸದಸ್ಯರಾದ ಶ್ರೀ. ಟಿ. ಎ. ಶರವಣ, ಮಹಿಳಾ ಅಧ್ಯಕ್ಷೆ ಶ್ರೀಮತಿ ಶೈಲಜಾ, ರಾಜ್ಯ ಪ್ರದಾನ ಕಾರ್ಯದರ್ಶಿ ಮರಿಯಪ್ಪ, ರಾಜ್ಯ ಸಂಚಾಲಕರಾದ ಶಿವ ಯಾದವ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.